‘ಸಂಗಮ ಸಮಾಗಮ'
ಡಾ.ಪ್ರಕಾಶ ಖಾಡೆ ಮತ್ತು ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯ ಅಧ್ಯಕ್ಷ ಪುಂಡಲೀಕ ಹಾಲಂಬಿ
ರಾಜ್ಯ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಶ್ರೀ ಪುಂಡಲೀಕ ಹಾಲಂಬಿ ಅವರು ಬಾಗಲಕೋಟ ಜಿಲ್ಲೆ ಕೂಡಲ ಸಂಗಮಕ್ಕೆ ಆಗಮಿಸಿದಾಗ ಕೂಡಲ ಸಂಗಮದ ಪ್ರವಾಸಿ ಮಂದಿರದಲ್ಲಿ ಡಾ.ಪ್ರಕಾಶ ಖಾಡೆ ಅವರು ಶ್ರೀ ಎಸ್.ಜಿ.ಕೋಟಿ ಅವರ ಪ್ರಧಾನ ಸಂಪಾದಕತ್ವದಲ್ಲಿ ಸಂಪಾದಿಸಿದ 'ಸಂಶೋಧನಾ ಸೋಪಾನಗಳು' ಕೃತಿ ಬಿಡುಗಡೆ ಮಾಡಿದರು.ಅವರೊಂದಿಗಿನ ಸ್ಮರಣೀಯ ಸಂದರ್ಭಗಳು :
ಬಾಗಲಕೋಟ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಳೆದ ಸಾಲಿನ ಕಾರ್ಯಕಾರಿ ಸಮಿತಿಯು ಹಮ್ಮಿಕೊಂಡಿದ್ದ ‘ಸಂಶೋಧನಾ ಕಮ್ಮಟ’ದಲ್ಲಿ ಮಂಡಿಸಲಾದ ಉಪನ್ಯಾಸಗಳನ್ನು ಒಳಗೊಂಡ ‘ಸಂಶೋಧನಾ ಸೋಪಾನ’ ಕೃತಿಯ ಬಿಡುಗಡೆ ಸಮಾರಂಭವು ಕೂಡಲ ಸಂಗಮದ ಅತಿಥಿ ಗೃಹದಲ್ಲಿ ರವಿವಾರ 29 ರಂದು ಜರುಗಿತು.
. ನಿಕಟ ಪೂರ್ವ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎಸ್.ಜಿ.ಕೋಟಿ,ಗೌರವ ಕಾರ್ಯದರ್ಶಿಗಳಾಗಿರುವ ಡಾ.ಪ್ರಕಾಶ ಖಾಡೆ,ಡಾ.ಅಶೋಕ ನರೋಡೆ ಸಂಪಾದಕತ್ವದಲ್ಲಿ ಪ್ರಕಟವಾಗಿರುವ ಕೃತಿಯನ್ನು ಕಸಬಾ ಜಂಬಗಿಯ ನಿರ್ಮಲ ಪ್ರಕಾಶನ ಪ್ರಕಟಿಸಿದ್ದು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪುಂಡಲೀಕ ಹಾಲಂಬಿ ಬಿಡುಗಡೆ ಮಾಡಿದರು.

ಕೂಡಲ ಸಂಗಮ ಜಯ ಮೃತ್ಯುಂಜಯ ಸ್ವಾಮೀಜಿ ಸಾನಿಧ್ಯ ವಹಿಸಿದ್ದರು.ಕಾರ್ಯಕ್ರದಲ್ಲಿ ಮಂಡ್ಯ ಜಿಲ್ಲಾ ಕಸಾಪ ಅಧ್ಯಕ್ಷೆ ಮೀರಾ ಶಿವಲಿಂಗಯ್ಯ,ಶ್ರೀಮತಿ ಹಾಲಂಬಿ,ಬಾಗಲಕೋಟ ಜಿಲ್ಲಾ ಕಸಾಪ ಅಧ್ಯಕ್ಷ ಡಾ.ಕಟಗಿಹಳ್ಳಿಮಠ ,ಸಹಕಾರಿ ಧುರೀಣ ಎಲ್.ಎಂ.ಪಾಟೀಲ,ನ್ಯಾಯವಾದಿ ತಾತಾಸಾಹೇಬ ಬಾಂಗಿ ,ಬಿ.ಪಿ.ಹಿರೇಸೋಮಣ್ಣವರ ,ಕೃಷ್ಣಗೌಡರ,ಶರಣು ಪಾಟೀಲ ಮೊದಲಾದವರು ಪಾಲ್ಗೊಂಡಿದ್ದರು.
ಜಮಖಂಡಿಯ ಚಿಂತನ ವೇದಿಕೆ ಮತ್ತು ನಿರ್ಮಲ ಪ್ರಕಾಶನ ಸಹಯೋಗದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಅರ್ಜುನ ಕೋರಟಕರ ಮತ್ತು ಪ್ರಕಾಶಕ ಸದಾಶಿವ ಮಾಳಿ ಸ್ವಾಗತ ಕೋರಿ ವಂದಿಸಿದರು.
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ